ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಅಂಬೆಸಂಗವಿ ಕ್ರಾಸ್ ಬಳಿ ಲಾರಿ ಮತ್ತು ಕಂಟೇನರ್ ಮಧ್ಯೆ ಭೀಕರ ರಸ್ತೆ ಅಪಘಾತವಾಗಿ ಇಬ್ಬರು ಚಾಲಕರು ಸಾವನ್ನಪ್ಪಿದ ಘಟನೆ ನಡೆದಿದೆ.
ಲಾರಿ ಚಾಲಕ ವಿಜಯಕುಮಾರ್(40) ಹಾಗೂ ಕಂಟೇನರ್ ಚಾಲಕ ರಾಮ್‍ಕಿಶನ್ (32) ಸಾವನ್ನಪ್ಪಿದ ನತದೃಷ್ಟವಂತರು. ವಾಹನದಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
ಅವರನ್ನು ಕೂಡಲೇ ಆಸ್ಪತ್ರೆಯ ಐಸಿಯು ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದರ್ ಕಡೆಯಿಂದ ವೇಗವಾಗಿ ಬಂದ ಕಂಟೇನರ್ ಲಾರಿಗೆ ಗುಜರಾತಿನಿಂದ ಟೈಲ್ಸ್ ತುಂಬಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಇದಕ್ಕೆ ಲಾಚಾರಿ ಚಾಲಕನ ನಿರ್ಲ್ಯಕ್ಷವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಭಾಲ್ಕಿ ಗ್ರಾಮೀಣ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.