ತನ್ನದೇ ತರಗತಿಯಲ್ಲಿ ಕಲಿಯುತ್ತಿರುವ ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಭೇಟಿಯಾಗಲು ಆಕೆಯ ಮನೆಗೆ ಕಾಲೇಜು ವಿದ್ಯಾರ್ಥಿಯೊಬ್ಬ ಆಗಮಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ವಿದ್ಯಾರ್ಥಿ ವಿದ್ಯಾರ್ಥಿನಿಯರಿಬ್ಬರೂ ಒಂದೇ ಕಾಲೇಜು ಹಾಗೂ ಒಂದೇ ಕ್ಲಾಸಿನಲ್ಲಿ ಕಲಿಯುತ್ತಿರುವವರು. ಪುತ್ತೂರು ನಗರದ ಮುಕ್ವೆ ಎಂಬಲ್ಲಿ ಈ ಘಟನೆ ನಡೆದ ಬಗ್ಗೆ ತಿಳಿದುಬಂದಿದೆ.


ಅನಿರೀಕ್ಷಿತವಾಗಿ ಮುಕ್ವೆಗೆ ಆಗಮಿಸಿದ ಗೆಜ್ಜೆಗಿರಿ ಸಮೀಪದ ವಿದ್ಯಾರ್ಥಿಯನ್ನು ಕಂಡು ಗಲಿಬಿಲಿಗೊಂಡ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.