ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹ ಸಂದರ್ಭದಲ್ಲಿ ಪದ್ಮಶ್ರೀ ರಾಮಚಂದ್ರ ಹೆಗಡೆ ಪ್ರಶಸ್ತಿ ಮತ್ತು ಟಿ.ವಿ. ರಾವ್ ಪ್ರಶಸ್ತಿಯನ್ನು ನೀಡುತ್ತಿದೆ.
ಈ ವರ್ಷದ ಚಿಟ್ಟಾಣಿ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಮತ್ತು ಟಿ.ವಿ. ರಾವ್ ಪ್ರಶಸ್ತಿಗೆ ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಸತ್ಯವತಿ ಡಿ. ಹೆಬ್ಬಾರ್ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 27ರಿಂದ ನವಂಬರ್ 2ರ ವರೆಗೆ ಸಪ್ತಾಹ ನಡೆಯಲಿದ್ದು, ನವಂಬರ್ 2ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅಭಿಮಾನಿ ಬಳಗದ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಮ್. ಗೋಪಿಕೃಷ್ಣ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

