ನಾಳೆ ದಿನಾಂಕ 21.102022 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಲಿತಾ ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.
ಪುತ್ತೂರಿನಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಈಗ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ನಾಳೆ ಲಲಿತಾ ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ ಸೇವೆ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಮಹಿಳೆಯರು ಲಲಿತಾ ಸಹಸ್ರನಾಮ ಪುಸ್ತಕ, ಎರಡು ಹರಿವಾಣಗಳು ಮತ್ತು ನಾಣ್ಯವನ್ನು ಜೊತೆಯಲ್ಲಿ ತರಬೇಕಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತ ಭಗವದ್ಭಕ್ತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
