ಪುತ್ತೂರು, ಅ 20 : ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ಇನ್ ಆರ್ಕಿಟೆಕ್ಚರ್ (ಎನ್ಎಟಿಎ-ನಾಟಾ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ಘಟಕದ ಸಂಚಾರ ನಿಯಂತ್ರಕರಾದ ಉಮೇಶ್ ಎನ್ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ರತ್ನಾವತಿ ಬಿ ದಂಪತಿ ಪುತ್ರಿ ವೃಂದಾ ಯು ಎನ್ ನಾಟಾ ಪರೀಕ್ಷೆಯಲ್ಲಿ 198ನೇ ರ್ಯಾಂಕ್ ಗಳಿಸಿದ್ದಾರೆ.
ಹಾಗೆಯೇ ಚೈತನ್ಯ ಎಸ್ (ಬಂಟ್ವಾಳದ ನೇರಳಕಟ್ಟೆಯ ಈಶ್ವರ ನಾಯ್ಕ ಎಸ್ ಮತ್ತು ಗೀತಾ ಜಿ ದಂಪತಿ ಪುತ್ರಿ) 230ನೇ ರ್ಯಾಂಕ್ ಗಳಿಸಿದ್ದಾರೆ.
ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

