ಕನ್ನಡ ನಾಡು ಕನ್ನಡ ನುಡಿ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರದ ವತಿಯಿಂದ ಆಯೋಜಿಸಲಾದ ಕೋಟಿ ಕಂಠ ಗಾಯನ ಕಾರ್ಯಕ್ರಮ ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 28ರಂದು ಜರಗಿತು.

ಕಾರ್ಯಕ್ರಮಕ್ಕೆ ದೀಪ ಬೆಳಗಿ ಚಾಲನೆ ನೀಡಿದ ಹೊಸದಿಗಂತ ಪತ್ರಿಕೆಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಕಾಶ್ ಪಿ.ಎಸ್ ಕನ್ನಡ ನಾಡು ನುಡಿಗಳ ಅವಶ್ಯಕತೆಯನ್ನು ತಿಳಿಸಿ ಶುಭ ಹಾರೈಸಿದರು.
ಬಳಿಕ ಜೈ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವವಿನೂತನ ವಿದ್ಯಾ ಚೇತನ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಕನ್ನಡ ಹಾಡುಗಳನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸುಮಾರು 2000 ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ 200 ಮಂದಿ ಶಿಕ್ಷಕ ಬಂಧುಗಳು ಹಾಡಿದರು.


ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಯಶೋದ ಸ್ವಾಗತಿಸಿ, ಶ್ರೀಮತಿ ದಿವ್ಯರಾಣಿ ಸಂಕಲ್ಪ ವಿಧಿ ಬೋಧಿಸಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ಶ್ರೀ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಭೂಮಿ ಕನ್ಸ್ಟ್ರಕ್ಷನ್ ಮಾಲಕರಾದ ಶ್ರೀ ನವೀನ್ ಪ್ರಸಾದ್ ರೈ ಕೈಕಾರ, ಮೆಸ್ಕಾಂ ನಿರ್ದೇಶಕರಾದ ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ, ವಿವೇಕಾನಂದ ಧ್ಯಾನ ಮಂದಿರ ನಿರ್ದೇಶಕಿ ಶ್ರೀಮತಿ ಲಕ್ಷ್ಮೀ.ವಿ.ಜಿ.ಭಟ್, ಯಕ್ಷಗಾನ ಕಲಾವಿದ ಶ್ರೀ ಭಾಸ್ಕರ ಶೆಟ್ಟಿ ಹಾಗೂ ಶಿಕ್ಷಕ, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
