ಕೋಝಿಕ್ಕೋಡ್‌ನ ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್ ಕೋಚ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್‌ನ ಅಥ್ಲೆಟಿಕ್ಸ್ ಕೋಚ್ ಶುಕ್ರವಾರ ಇಲ್ಲಿನ ತರಬೇತಿ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರು 22 ವರ್ಷದ ಜಯಂತಿ ತಮಿಳುನಾಡು ಮೂಲದವರು.
ಶುಕ್ರವಾರ ಬೆಳಗ್ಗೆ 5 ಗಂಟೆಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಸ್ಪೋರ್ಟ್ಸ್ ಅಕಾಡೆಮಿಯ ಹಾಸ್ಟೆಲ್ ಕೊಠಡಿಯಲ್ಲಿ ಜಯಂತಿ ಅವರ ಮೃತದೇಹ ಪತ್ತೆಯಾಗಿದೆ.
ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

