Saturday, January 18, 2025
Homeಸುದ್ದಿಪುತ್ತೂರು ಸರಕಾರಿ ಆಸ್ಪತ್ರೆಗೆ ಶುದ್ಧ ನೀರಿನ ಘಟಕದ ಕೊಡುಗೆ

ಪುತ್ತೂರು ಸರಕಾರಿ ಆಸ್ಪತ್ರೆಗೆ ಶುದ್ಧ ನೀರಿನ ಘಟಕದ ಕೊಡುಗೆ

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಸ್ಥಳೀಯವಾಗಿ ನೀಡುವ ಕೊಡುಗೆಗಳು ಜನಸಾಮಾನ್ಯರ ಅವಶ್ಯಕತೆಗಳನ್ನು ಪೂರೈಸುವಲ್ಲಿ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ   ಪ್ರೌಢಶಾಲಾ ಮತ್ತು ಪ್ರಾಥಮಿಕ  ಶಾಲಾ ಶಿಕ್ಷಕರ ಸಂಘಟನೆಗಳ ಒಕ್ಕೂಟವು ಶುದ್ಧ ನೀರಿನ ಘಟಕವನ್ನು ಸರಕಾರಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿರುವುದು ಅತ್ಯಂತ ಶ್ಲಾಘನೀಯವೆಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು. 

ಕೋವಿಡ್ 19 ಸಂದರ್ಭದಲ್ಲಿ ಶಿಕ್ಷಕ ವೃಂದವು ಅಂಗನವಾಡಿ ಕಾರ್ಯಕರ್ತರಿಗೆ, ಬಿಸಿ ಊಟದ ಸಿಬ್ಬಂದಿಯವರಿಗೆ ಮತ್ತು ಅನುದಾನ ರಹಿತ ಶಾಲಾ ಶಿಕ್ಷಕರಿಗೆ ವಸ್ತು ರೂಪದಲ್ಲಿ ಮತ್ತು ಆರ್ಥಿಕವಾಗಿ ಸಹಾಯ ನೀಡಿರುವುದನ್ನು ನೆನಪಿಸಿ ಶಿಕ್ಷಕರ ಸಂಘಟನೆಗಳು ಸಾಮಾಜಿಕ ಬದ್ಧತೆಯನ್ನು ವ್ಯಕ್ತಪಡಿಸಿದ ಬಗ್ಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಪುತ್ತೂರು ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಪುತ್ತೂರು ಸರ್ಕಾರಿ ಆಸ್ಪತ್ರೆಗೆ  ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್, ವೈದ್ಯಾಧಿಕಾರಿ ಡಾ. ಯದುರಾಜ್, ಆಸ್ಪತ್ರೆಯ ಸಲಹಾ ಸಮಿತಿಯ ರಫೀಕ್, ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಕುಮಾರ ರೈ ಶುಭ ಹಾರೈಸಿದರು.

ಶಿಕ್ಷಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ದಿವಾಕರ ಆಚಾರ್ಯ ಗೇರುಕಟ್ಟೆ ಒಂದು ಲಕ್ಷ ರೂಪಾಯಿ ವೆಚ್ಚದ ಈ ಕೊಡುಗೆಗೆ ಸಹಕಾರ ನೀಡಿದ ಇಲಾಖೆಯ ಅಧಿಕಾರಿಗಳನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ವಿಷ್ಣು ಪ್ರಸಾದ್, ಸರ್ವೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜಯರಾಮ ಶೆಟ್ಟಿ, ಡಾ. ಸುಶಾಂತ, ನರ್ಸಿಂಗ್ ವಿಭಾಗದ  ಮೆಟ್ರಾನ್ ದೇವಕಿ, ದೈಹಿಕ ಶಿಕ್ಷಣ ಶಿಕ್ಷಕರಾದ ರಾಮಣ್ಣ ರೈ ಕೈಕಾರ ಮತ್ತು ಆಸ್ಪತ್ರೆಯ ವೈದ್ಯಕೀಯ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಪುತ್ತೂರು ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ.ಕೆ ಸ್ವಾಗತಿಸಿ ಶಿಕ್ಷಕರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ರಾಮಕೃಷ್ಣ.ಎ ವಂದಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಕಾರ್ಯಕ್ರಮ ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments