ಉಡುಪಿ : ಚಿಟ್ಟಾಣಿ ಅಭಿಮಾನಿ ಬಳಗ, ಉಡುಪಿ ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 2, 2022 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊ0ಡಿತು.
ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಕಲಾವಿದ ಕೆ. ಗೋವಿಂದ ಭಟ್ಟರಿಗೂ, ಟಿ.ವಿ ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದೆ ಶ್ರೀಮತಿ ಸತ್ಯವತಿ ಟಿ. ಹೆಬ್ಬಾರರಿಗೂ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಿದರು.
ಹೈಟೆಕ್ ಮಡಿಕೇರ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಟಿ. ಎಸ್. ರಾವ್, ಯಕ್ಷಗಾನ ಕಲಾರಂಗದ ಆಧ್ಯಕ್ಷ ಎಂ. ಗಂಗಾಧರ ರಾವ್ ಅಭ್ಯಾಗತರಾಗಿ ಭಾಗವಹಿಸಿದ್ದರು.
ಚಿಟ್ಟಾಣಿ ಅಭಿಮಾನಿ ಬಳಗದ ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್, ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಉಪಸ್ಥಿತರಿದ್ದರು. ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು.
ಪ್ರೊ. ನಾರಾಯಣ ಎಂ. ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು. ಸಭಾಕಾರ್ಯಕ್ರದ ಬಳಿಕ ಜ್ವಾಲಾಪ್ರತಾಪ ಯಕ್ಷಗಾನ ಪ್ರದರ್ಶನ ಸಂಪನ್ನಗೊ0ಡಿತು.

