ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ.
ಛತ್ತೀಸ್‌ಗಢದ ಬಿಲಾಸ್‌ಪುರ್‌ನಲ್ಲಿ ನಡೆದ 23ರ ಹರೆಯದೊಳಗಿನ 2ನೇ ರಾಷ್ಟ್ರೀಯ ಅತ್ಲೆಟಿಕ್ ಕ್ರೀಡಾಕೂಟದಲ್ಲಿ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
12.79 ಮೀಟರ್ ದೂರ ಜಿಗಿಯುವ ಮೂಲಕ ತನ್ನ ವೈಯಕ್ತಿಕ ದಾಖಲೆಯನ್ನೂ ಉತ್ತಮ ಪಡಿಸಿಕೊಂಡಿದ್ದಾರೆ. ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಇವರಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ