ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು ಅವರು ಸ್ವಲ್ಪ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.


ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರ ಕಂಟೈನರ್ ಬಳಿ ಇಂದು ವಜೀರಾಬಾದ್‌ನ ಜಾಫರ್ ಅಲಿ ಖಾನ್ ಚೌಕ್ ಬಳಿ ಗುಂಡಿನ ದಾಳಿ ನಡೆದಿದೆ.
ಇಮ್ರಾನ್ ಖಾನ್ ಅವರ ಕಾಲಿಗೆ ಗಾಯಗಳಾಗಿವೆ; ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.