ಸಾಗರ: ಸದಾ ಒಂದಲ್ಲ ಒಂದು ವಿವಾದಗಳಿಂದ ಹಿಂದೂ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಲು ಯತ್ನಿಸುತ್ತಿರುವ ವಿವಾದಾತ್ಮಕ ಸಾಹಿತಿ ಕೆ.ಸಿ ಭಗವಾನ್ ವಿರುದ್ಧ ನ್ಯಾಯಾಲವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿದ್ದಾರೆ ಎಂಬುದು ಅವರ ಮೇಲಿರುವ ಆರೋಪವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು.
ಪ್ರಕರಣದ ವಿಚಾರಣೆಗೆ ಇಂದು ಭಗವಾನ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದರೂ ಸಹ ಇಂದು ಸಾಹಿತಿ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ಆದ ಕಾರಣ ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
