ಪುತ್ತೂರು, ನ 03: ಉಡುಪಿಯ ಹೆಬ್ರಿಯಲ್ಲಿ ನಡೆದ ವಿದ್ಯಾ ಭಾರತಿ ಪ್ರಾಂತ ಹಾಗು ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್ ಎಸ್(ಬಂಟ್ವಾಳದ ದೇವಸ್ಯ ಸೂರ್ಯನಾರಾಯಣ ಎನ್ ಕೆ ಮತ್ತು ಸುಮನ ಎಸ್‌ಎನ್ ದಂಪತಿ ಪುತ್ರ)


ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಋತ್ವಿಕ್ ಸಾಯಿ ಗಣೇಶ್ (ಕುಂದಾಪುರದ ತಾಲೂಕಿನ ಸಿದ್ದಾಪುರದ ಜನಾರ್ಧನ ಎಂ.ಆರ್ ಮತ್ತು ಜ್ಯೋತಿ ಕೆ.ಸಿ ದಂಪತಿ ಪುತ್ರ) ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಆಗಿರುತ್ತಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದರ ವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.