ಪುತ್ತೂರು,ನ 5: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಈಶ್ವರಮಂಗಲದ ಪಂಚಲಿಂಗೇಶ್ವರ ಪದವಿ ಪೂರ್ವ ಕಾಲೇಜು ಇದರ ಸಹಯೋಗದೊಂದಿಗೆ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರು ಚಾಂಪಿಯನ್‌ಶಿಪ್ ತಂಡ ಪ್ರಶಸ್ತಿ ಪಡೆದುಕೊಂಡರು.

ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಜತ್ ಆರ್ ಭಟ್ ವೈಯಕ್ತಿಕ ಚಾಂಪಿಯನ್ ಪಡೆದರು. ಅದೇ ರೀತಿ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು.
ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ರಜತ್ ಆರ್ ಭಟ್, ನಿತಿನ್ ಆರ್ ಎ, ಜಯಶೀಲ್ ರೈ, ಆರ್ಯ ಪಟೇಲ್, ಪವನ್ ಕುಮಾರ್, ಲೋಹಿತ್ ಎಸ್ ಡಿ, ಬೃಜೇಶ್ ಜಿ ರೈ,ಗಗನ್ ಶೆಣೈ, ಚರಣ್ ಪಿ, ಅನೀಷ್, ವಿಘ್ನೇಶ್ ಅಶ್ವಿತ್, ಧನುಷ್ ಕೆ, ಪ್ರಮಥ್, ಎಲ್. ಧನುಷ್, ನಿಹಾಲ್ ರಾಜ್, ಅಜಿತ್ ಭಾಗವಹಿಸಿದ್ದರು.
ಬಾಲಕಿಯರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಪವಿತ್ರ ಭಟ್ ಕೆ, ಹೇಮಲತಾ, ಪೂಜಾಶ್ರೀ ಎ, ಕೀರ್ತಿಲತಾ, ದೀಕ್ಷಾ ಜಿ, ಮಂಜುಶ್ರೀ, ವಿನಿತಾ, ನಿತ್ಯಶ್ರೀ ರೈ, ಭವಿಷ್ಯ, ಭೂಮಿಕಾ, ಕುಸುಮ, ಸೌಮ್ಯ ರೈ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.




- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

