ಶ್ರೀಕೃಷ್ಣ ನಟ್ಟೋಜ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು : ಪುತ್ತೂರಿನ ದರ್ಭೆಯಲ್ಲಿರುವ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಶ್ರೀಕೃಷ್ಣ ನಟ್ಟೋಜ ಭಾಗವಹಿಸಿ ದ್ವಿತೀಯ ಬಹುಮಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ದಂಪತಿ ಪುತ್ರ.
