ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9ನೇ ತರಗತಿ ವಿದ್ಯಾರ್ಥಿನಿ ಅನ್ನಿಕಾ.ಎಂ (ಚಾರ್ವಾಕ ಎ.ಎಸ್.ಐ ಕೃಷ್ಣಪ್ಪ.ಎಂ, ಶಿಕ್ಷಕಿ ವಾಣಿಶ್ರೀ ದಂಪತಿ ಪುತ್ರಿ) 3000 ಮೀಟರ್ -ಪ್ರಥಮ ಸ್ಥಾನ ಪಡೆದುಕೊಂಡಿದ್ದು,
ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

