ಮಗು ಹುಟ್ಟಿದ ಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತು ಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ ಮಗುವಿಗೆ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಸದಾ ಜಾಗೃತರಾಗಬೇಕು ಎಂದು ದೂರದರ್ಶನದ ಚ0ದನ ವಾಹಿನಿಯ ಖ್ಯಾತ ರಸಪ್ರಶ್ನೆ ‘ಥಟ್ ಅ0ತ ಹೇಳಿ’ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆ ನೀಡುವ ಕನಸುಗಳು-2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹುಟ್ಟಿನಿಂದಲೇ ನಾವು ಬುದ್ದಿವಂತರು. ಆದರೆ ನಾವು ಬೆಳೆಯುವ ಪರಿಸರದ ಆಧಾರದ ಮೇಲೆ ನಮ್ಮಗುಣ, ನಡತೆ ಮತ್ತು ವರ್ತನೆ ಬದಲಾವಣೆಯಾಗುತ್ತದೆ. ಜಂಕ್ ಫುಡ್ ಗಳನ್ನು ತ್ಯಜಿಸಿ, ಆರೋಗ್ಯಕ್ಕೆ ಹಿತಕರವಾದ ಆಹಾರವನ್ನು ಸೇವಿಸಬೇಕು. ವಿದ್ಯಾರ್ಥಿಗಳು ಓದುವುದರ ಜೊತೆಗೆ ಇನ್ನಿತರ ಚಟುವಟಿಕೆಯನ್ನು ರೂಢಿಸಿಕೊಳ್ಳಬೇಕು. ನಿರಂತರವಾಗಿ ಅಧ್ಯಯನ ಮಾಡುವುದರ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು. ವಿದ್ಯಾರ್ಜನೆ ವಿದ್ಯಾರ್ಥಿಯ ಬದುಕಿನ ಏಕೈಕ ನಿರ್ಧಾರವಾಗಬೇಕೆಂದರು.
ಕಾರ್ಯಕ್ರಮದಲ್ಲಿ ವಿವೇಕಾನ0ದ ಆ0ಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‌ರೈ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಭಾಗ್ಯಶ್ರೀ ನಿರೂಪಿಸಿದರು.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು