Sunday, October 6, 2024
Homeಸುದ್ದಿಪಾರಂಪರಿಕವಾದ ಕಲೆ ಮತ್ತು ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ - ಡಾ. ಎಚ್. ಎಸ್. ಬಲ್ಲಾಳ್

ಪಾರಂಪರಿಕವಾದ ಕಲೆ ಮತ್ತು ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ – ಡಾ. ಎಚ್. ಎಸ್. ಬಲ್ಲಾಳ್

ಯಕ್ಷಗಾನ ಕೇಂದ್ರ ಇಂದ್ರಾಳಿ, ಮಾಹೆ, ಕನ್ನಡ ಮತ್ತು  ಸಂಸ್ಕೃತಿ  ಇಲಾಖೆ ಸಹಯೋಗದಲ್ಲಿ ದಿನಾಂಕ 12.11.2022 ಶನಿವಾರದಂದು ಯಕ್ಷಗಾನ ಕೇಂದ್ರ, ಇಂದ್ರಾಳಿ ಇಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್  ಅವರು ಕೇಂದ್ರವು  ಆರಂಭದಿ೦ದಲೂ ಎಂ.ಜಿ.ಎ0 ಕಾಲೇಜಿನ ಭಾಗವಾಗಿತ್ತು.

ಇತ್ತೀಚೆಗೆ ಮಾಹೆ ಅದರ ಪೂರ್ಣಜವಾಬ್ದಾರಿಯನ್ನು ವಹಿಸಿಕೊಂಡಿದೆ. ಯಕ್ಷಗಾನ ಚಟುವಟಿಕೆಗಳಿಗೆ ಮಾಹೆ ಸದಾ ಪ್ರೋತ್ಸಾಹ ನೀಡುತ್ತದೆ. ಪಾರಂಪರಿಕವಾದ ಕಲೆ ಮತ್ತು  ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇಲ್ಲಿನ ವಿದ್ಯಾರ್ಥಿಗಳಿಗೆ ಯಕ್ಷಗಾನದೊಂದಿಗೆ  ಶಿಸ್ತಿನ ಶಿಕ್ಷಣ ಸಿಗುತ್ತಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಕೇಂದ್ರದ ಸಲಹಾಸಮಿತಿ ಅಧ್ಯಕ್ಷರಾದ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಾಹೆ ಕುಲಪತಿ ಡಾ. ನಾರಾಯಣ ಸಭಾಹಿತ್, ಕನ್ನಡ ಮತ್ತು  ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಅತಿಥಿಗಳಾಗಿ ಉಪಸ್ಥಿತರಿದ್ದರು.  

ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಶ್ರೀ ಬಿ. ಭುವನಪ್ರಸಾದ್ ಹೆಗ್ಡೆ, ಶ್ರೀ ಮಂಜುನಾಥ ಮಯ್ಯ ಉಪಸ್ಥಿತರಿದ್ದರು. ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಕೇಂದ್ರದ ಸಲಹಾ ಸಮಿತಿ ಸದಸ್ಯ ಮಂಜುನಾಥ ಮಯ್ಯ ವಂದಿಸಿದರು. ಎಂ.ಜಿ.ಎ೦ ಕಾಲೇಜಿನ ಕನ್ನಡ ಪ್ರಾಧ್ಯಾಪಕ ರಾಘವೇಂದ್ರ  ತುಂಗ ಕಾರ್ಯಕ್ರಮ ನಿರೂಪಿಸಿದರು.

ಸಭಾಕಾರ್ಯಕ್ರಮದ ಆರಂಭದಲ್ಲಿ ಕೇಂದ್ರದ ವಿದ್ಯಾರ್ಥಿಗಳು ಯಕ್ಷಗಾನ ಪೂರ್ವರಂಗ ಪ್ರದರ್ಶಿಸಿದರು. ರಾತ್ರಿ ಕೇಂದ್ರದ ವಿದ್ಯಾರ್ಥಿಗಳು, ಕಲಾವಿದರು, ಅತಿಥಿ ಕಲಾವಿದರ ಕೂಡುವಿಕೆಯಲ್ಲಿ  ರುಕ್ಮಾವತಿ ಕಲ್ಯಾಣ ಪ್ರಸಂಗವನ್ನು ಪ್ರಸ್ತುತ ಪಡಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments