Thursday, November 21, 2024
Homeಸುದ್ದಿಶ್ರೀವರ್ಣಾ. ಪಿ.ಡಿ ರಾಷ್ಟ್ರಮಟ್ಟಕ್ಕೆ ಮತ್ತು ಕೃತಿ.ಕೆ ರಾಜ್ಯಮಟ್ಟಕ್ಕೆ ಆಯ್ಕೆ

ಶ್ರೀವರ್ಣಾ. ಪಿ.ಡಿ ರಾಷ್ಟ್ರಮಟ್ಟಕ್ಕೆ ಮತ್ತು ಕೃತಿ.ಕೆ ರಾಜ್ಯಮಟ್ಟಕ್ಕೆ ಆಯ್ಕೆ

 ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಶ್ರೀವರ್ಣಾ. ಪಿ.ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ ಪ್ರದೇಶ, ತೆಲಂಗಣ ರಾಜ್ಯವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಶ್ರೀವರ್ಣಾ.ಪಿ.ಡಿ (ಪಾಲೆತ್ತಡಿ ಧರ್ಣಪ್ಪ ಗೌಡ, ಮಮತಾ.ಪಿ. ದಂಪತಿ ಪುತ್ರಿ)

ಎತ್ತರ ಜಿಗಿತ, 80 ಮೀಟರ್ ಹರ್ಡಲ್ಸ್, ಉದ್ದ ಜಿಗಿತ , 4*100 ಮೀಟರ್ ರಿಲೇ -ಪ್ರಥಮ ಸ್ಥಾನ ಪಡೆದುಕೊಂಡಿದ್ದು,  ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ  ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು, ಸರಕಾರಿ ಪ್ರೌಢಶಾಲೆ ಅತ್ತಾವರ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ  ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನವಂಬರ್ 15 ಮತ್ತು 16 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದ,

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಆಂಗ್ಲ  ಮಾಧ್ಯಮ ಶಾಲೆಯ  8ನೇ ತರಗತಿಯ ಕೃತಿ.ಕೆ (ಬನ್ನೂರು ಕೊರಗಪ್ಪ ಗೌಡ ಮತ್ತು ವನಿತಾ.ಎ ದಂಪತಿ ಪುತ್ರಿ) 400 ಮೀ ಪ್ರಥಮ, 600ಮೀ ಪ್ರಥಮ, 200ಮೀ ತೃತೀಯ ಹೀಗೆ 3 ಚಿನ್ನ ಹಾಗೂ 1 ಕಂಚಿನ ಪದಕಗಳೊಂದಿಗೆ ಪುತ್ತೂರು ತಾಲೂಕಿನಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್ ಗೆದ್ದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು,

ಪುತ್ತೂರು ತಾಲೂಕಿನಿಂದ ಭಾಗವಹಿಸಿರುವ ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಚಾಂಪಿಯಾನ್‍ಶಿಪ್‍ಗೆ ಭಾಜನರಾಗಿರುವ ಏಕೈಕ ವಿದ್ಯಾರ್ಥಿನಿ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments