

“ಮಹಿಳೆಯರು ಯಾವುದನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ಬಾಬಾ ರಾಮದೇವ್ ಮಹಿಳೆಯರ ಸಭೆಯಲ್ಲಿ ಮುಜುಗರ ತರಿಸುವ ಹೇಳಿಕೆ ನೀಡಿ ಮತ್ತೆ ಸುದ್ದಿಯಾಗಿದ್ದಾರೆ.
ಪತಂಜಲಿ ಯೋಗ ಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ಜಂಟಿಯಾಗಿ ಥಾಣೆಯ ಹೈಲ್ಯಾಂಡ್ ಪ್ರದೇಶದಲ್ಲಿ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಮಾವೇಶವನ್ನು ಶುಕ್ರವಾರ ಆಯೋಜಿಸಿತ್ತು. ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಯೋಗ ಗುರು ಬಾಬಾ ರಾಮ್‌ದೇವ್ ಶುಕ್ರವಾರ ಮುಜುಗರ ತರಿಸುವ ಹೇಳಿಕೆ ನೀಡಿದ್ದಾರೆ.
ವೇದಿಕೆಯಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಪಕ್ಕದಲ್ಲಿ ಕುಳಿತಿದ್ದ ಬಾಬಾ ರಾಮ್‌ದೇವ್ ಅವರ ಹೇಳಿಕೆ ಅಮೃತಾ ಫಡ್ನವಿಸ್ ಅವರಿಗೆ ಮುಜುಗರ ತರಿಸುವಂತಿತ್ತು.
“ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿ ಚೆನ್ನಾಗಿ ಕಾಣುತ್ತಾರೆ ಮತ್ತು ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ ಹೇಳಿದ್ದು ಅಲ್ಲಿ ನೆರೆದ ಮಹಿಳೆಯರಿಗೆ ಇರುಸುಮುರುಸು ಉಂಟುಮಾಡಿತ್ತು.
ಇದಕ್ಕೂ ಮುನ್ನ, ರಾಮ್‌ದೇವ್ ಅವರು ಅಮೃತಾ ಫಡ್ನವಿಸ್ ಅವರ ಆರೋಗ್ಯಕರ ಜೀವನಶೈಲಿಯನ್ನು ನಿರ್ವಹಿಸುವುದಕ್ಕಾಗಿ ಮತ್ತು ಯಾವಾಗಲೂ ಯಂಗ್ ಆಗಿ ಕಾಣಲು ಶ್ರಮಿಸುತ್ತಿರುವ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.