
ಪುತ್ತೂರು,ಡಿ 1: ರಾಜಸ್ತಾನದ ಜೋಧಪುರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪ೦ದ್ಯಾಟದಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನುಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ
ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ ಪ್ರಥಮ ಸ್ಥಾನ ಗಳಿಸಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಶಟಲ್ ಬ್ಯಾಡ್ಮಿ೦ಟನ್ ಪ೦ದ್ಯಾಟಕ್ಕೆ ಆಯ್ಕೆ ಆಗಿದ್ದಾರೆ.
ಈತನು ಪುತ್ತೂರು ಬೊಳುವಾರಿನ ಪ್ರತಾಪ್ ಸಿಂಹ ವರ್ಮ ಹಾಗೂ ವೀಣಾ ಕುಮಾರಿ ದಂಪತಿಯ ಪುತ್ರ.
ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
