

ಪ್ರಖ್ಯಾತ ಕನ್ನಡ ಸಿನಿಮಾ ನಟ ಕಿಚ್ಚ ಸುದೀಪ್ ದಂಪತಿ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಮಂಗಳೂರಿಗೆ ಬಂದಿದ್ದ ಸುದೀಪ್ ದಂಪತಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಗೆ ಪತ್ನಿ ಪ್ರಿಯಾ ಸುದೀಪ್ ಜೊತೆ ಸುದೀಪ್ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವಸ್ಥಾನದ ವತಿಯಿಂದ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ನಂತರ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.