
ಪುತ್ತೂರು, ಡಿ 05: ಅಸ್ಸಾಂ ನ ಚಂದ್ರಪುರ್‌ದಲ್ಲಿ ನಡೆದ 33ನೇ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚೆಸ್ ಪಂದ್ಯಾಟದಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್ ಎಸ್(ಬಂಟ್ವಾಳದ ದೇವಸ್ಯ ಸೂರ್ಯನಾರಾಯಣ ಎನ್ ಕೆ ಮತ್ತು ಸುಮನ ಎಸ್‌ಎನ್ ದಂಪತಿ ಪುತ್ರ)
ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಋತ್ವಿಕ್ ಸಾಯಿ ಗಣೇಶ್(ಕುಂದಾಪುರ ತಾಲೂಕಿನ ಸಿದ್ದಾಪುರದ ಜ್ಯೋತಿ ಕೆ.ಸಿ ರವರ ಪುತ್ರ) ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿ ಸ್ಕೂಲ್‌ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆಆಯ್ಕೆ ಆಗಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

