ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮ ನಡೆಯಿತು. ಪದವಿ ಪೂರ್ವ ವಾಣಿಜ್ಯ ವಿದ್ಯಾರ್ಥಿಗಳು ಕೆಮ್ಮಿಂಜೆಯ ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.
ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕದ ಆಡಳಿತ ವಿಭಾಗದ ರಾಧೇಶ್ ಮಾಹಿತಿ ನೀಡಿ, ಕ್ಯಾಂಪ್ಕೋ ಮೂಲಕ ಕೃಷಿಕರಿಂದ ಕೋಕೋ ಖರೀದಿಸಿ ಅದನ್ನು ಸಂಸ್ಕರಣೆ ಮಾಡಿ ಕೋಕೋ ಪೌಡರ್ ಹಾಗೂ ಕೋಕೋ ಬಟರ್ ಉತ್ಪಾದನೆ ಮಾಡಲಾಗುತ್ತದೆ. ಕೋಕೋ ಬಟರ್‌ಗೆ ಕೆ.ಜಿ.ಗೆ 700 ರೂಪಾಯಿಗೂ ಹೆಚ್ಚು ಮೌಲ್ಯವಿದ್ದು, ದೇಶದ ವಿವಿಧ ಘಟಕಗಳಿಗೆ ಮಾರಾಟ ಮಾಡಲಾಗುತ್ತಿದೆ.
ಘಟಕದಲ್ಲಿ ಉತ್ಪಾದಿಸಿದ ವಿವಿಧ ಬಗೆಯ ಉತ್ಪನ್ನಗಳನ್ನು ದೇಶದ ವಿವಿಧೆಡೆ ವಿತರಣೆ ಹಾಗೂ ದಕ್ಷಿಣ ಆಫ್ರಿಕಾ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಚಾಕಲೇಟ್ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕೋ ಕೋ ಬೀನ್ ಸಂಸ್ಕರಣೆ ಹೊಂದಿ ಕೋ ಕೋ ಪೌಡರ್ ಹಾಗೂ ಬಟರ್ ಆಗುವ ವಿಧಾನದ ಬಗೆಗೆ, ಸಕ್ಕರೆ ಹಾಗೂ ವಿವಿಧ ವಸ್ತುಗಳನ್ನು ಬಳಸಿಕೊಂಡು ಚಾಕಲೇಟ್ ಉತ್ಪಾದನೆಯಾಗುವ ಬಗೆ ಹಾಗೂ ಅದನ್ನು ಪ್ಯಾಕೇಜಿಂಗ್ ಮಾಡುವ ಪ್ರಕ್ರಿಯೆಯ ಕುರಿತಾದ ಮಾಹಿತಿಯನ್ನು ಪಡೆದುಕೊಂಡರು.
ರಾಧೇಶ್ ಅವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. 63 ವಿದ್ಯಾರ್ಥಿಗಳು ಕ್ಯಾಂಪ್ಕೋ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಈ ವೇಳೆ ನೆಲ್ಲಿಕಟ್ಟೆ ಅಂಬಿಕಾ ಪಿಯು ವಿದ್ಯಾಲಯ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ, ಉಪನ್ಯಾಸಕರಾದ ವಿದ್ಯಾ ಸರಸ್ವತಿ, ಕಾವ್ಯಾ, ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ಉಪನ್ಯಾಸಕ ಹರ್ಷಿತ್ ಪಿಂಡಿವನ ಉಪಸ್ಥಿತರಿದ್ದರು.
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ