ಕುದುರೆಮುಖ ಕಬ್ಬಿಣ ಅದಿರು ಕಂಪೆನಿ ಮಂಗಳೂರಿನಲ್ಲಿ ಆಯೋಜಿಸಿದ್ದ 5ನೇ ರಾಷ್ಟ್ರೀಯ ಮುಕ್ತ ರಾಪಿಡ್ ಚೆಸ್ ಟೂರ್ನಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಧನುಷ್ ರಾಮ್ ( ಶ್ರೀ ದಿನೇಶ್ ಪ್ರಸನ್ನ ಹಾಗೂ ಶ್ರೀಮತಿ ಉಮಾ.ಡಿ.ಪ್ರಸನ್ನ ದಂಪತಿ ಪುತ್ರ) ಕರ್ನಾಟಕವನ್ನು ಪ್ರತಿನಿಧಿಸಿ ಮುಕ್ತ ವಿಭಾಗದಲ್ಲಿ ಟೈಬ್ರೇಕರ್ ನಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.
ಈ ವಿಭಾಗದಲ್ಲಿ ವಿವಿಧ ರಾಜ್ಯಗಳ 416 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು..
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ
ದಶಂಬರ್ 13ರಂದು ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಪ್ರೌಢ ವಿಭಾಗದ ಭಾವಗೀತೆಯಲ್ಲಿ ತೃತೀಯ ಬಹುಮಾನ ಗಳಿಸಿರುತ್ತಾರೆ.
ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ 7ನೇ ತರಗತಿಯ ಕುಮಾರಿ ನಿಲಿಷ್ಕಾ ದ್ವಿತೀಯ ಬಹುಮಾನ ಹಾಗೂ ಲಘು ಸಂಗೀತದಲ್ಲಿ 7ನೇ ತರಗತಿಯ ಕುಮಾರಿ ಸುಪ್ರಜಾ ರಾವ್ ತೃತೀಯ ಬಹುಮಾನ ಗಳಿಸಿರುತ್ತಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

