
ಪುತ್ತೂರು, ಡಿ 15: ಯಕ್ಷಗಾನಾಚಾರ್ಯ ಪಾರ್ತಿಸುಬ್ಬನ ತವರುನೆಲ ಕುಂಬ್ಳೆಯ ಶೇಡಿಕಾವಿನಲ್ಲಿ ಡಿಸೆ0ಬರ್ 18ರ0ದು ನಡೆಯಲಿರುವ ಕಣಿಪುರ ಯಕ್ಷೋತ್ಸವದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಸ್ವಸ್ತಿಕ್ ಶರ್ಮ ಪಿ ಯಕ್ಷಪ್ರತಿಭಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕುಂಬ್ಳೆ ಸೀಮೆಯ ಬಳ್ಳಂಬೆಟ್ಟು ಮೂಲದ ಖ್ಯಾತ ಪುಂಡುವೇಷಧಾರಿ ದಿ. ಶ್ರೀಧರ ಭಂಡಾರಿ ಸ್ಮರಣಾರ್ಥ ಪ್ರಶಸ್ತಿ ನೀಡಲಿದ್ದು, ಪ್ರಶಸ್ತಿಯು ಐದು ಸಾವಿರ ರೂ ನಗದು ಮತ್ತು ಸ್ಮರಣಿಕೆ, ಸನ್ಮಾನ ಪತ್ರ, ಪಾರಿತೋಷಕವನ್ನೊಳಗೊಂಡಿದೆ.
ಈತನು ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದ ಪಳ್ಳತ್ತಡ್ಕದ ಕೇಶವ ಪಿ ಮತ್ತು ದಿವ್ಯಾ ಪಿ ದಂಪತಿ ಪುತ್ರ.