Saturday, January 18, 2025
Homeಸುದ್ದಿಕರ್ನಾಟಕ ವಿಧಾನಸಭೆ ಸಭಾಂಗಣದಲ್ಲಿ ವಿ.ಡಿ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣ - ವಿಧಾನಸಭೆಯ ಹೊರಗೆ ಪ್ರತಿಭಟನೆ...

ಕರ್ನಾಟಕ ವಿಧಾನಸಭೆ ಸಭಾಂಗಣದಲ್ಲಿ ವಿ.ಡಿ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣ – ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರು

ಬೆಳಗಾವಿ | ಕರ್ನಾಟಕ ವಿಧಾನಸಭೆ ಸಭಾಂಗಣದಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು.

ವಾಲ್ಮೀಕಿ, ಬಸವಣ್ಣ, ಕನಕದಾಸ, ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಹಲವರ ಭಾವಚಿತ್ರಗಳನ್ನು ಅಳವಡಿಸುವಂತೆ ಕಾಂಗ್ರೆಸ್ ಶಾಸಕರು ಸ್ಪೀಕರ್‌ಗೆ ಪತ್ರ ಬರೆದು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸಭೆ ಸಭಾಂಗಣದಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಪ್ರತಿಷ್ಠಾಪಿಸುವುದನ್ನು ವಿರೋಧಿಸಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದರು.

“ನಮ್ಮ ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಅವರು ಅದನ್ನು ಅಡ್ಡಿಪಡಿಸಲು ಬಯಸುತ್ತಾರೆ. ಅವರ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಈ ಫೋಟೋ ತಂದಿದ್ದಾರೆ. ಅವರಿಗೆ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಮತ್ತು ಶಾಸಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments