
ಇತ್ತೀಚಿಗೆ ನಮ್ಮನ್ನಗಲಿದ ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ದಿ| ಕುಂಬಳೆ ಸುಂದರ ರಾವ್ ಅವರ ಆತ್ಮವೃತ್ತಾಂತದ ಕೃತಿಯಾದ ‘ಯಕ್ಷಪಥದ ಯಾತ್ರಿಕ’ ಎಂಬ ಪುಸ್ತಕವು ಅನಾವರಣಗೊಳ್ಳಲಿದೆ.
ಈ ಆತ್ಮಕಥೆಯ ಪುಸ್ತಕ ಬಿಡುಗಡೆ ಸಮಾರಂಭವು ದಿನಾಂಕ 31.12.2022ರ ಶನಿವಾರ ಸಂಜೆ 4 ಘಂಟೆಗೆ ಸರಿಯಾಗಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಕೆ. ಗೋವಿಂದ ಭಟ್ ಅವರು ಗ್ರಂಥವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಕಾರ್ಯಕ್ರಮವು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗ, ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಮತ್ತು ಕರ್ನಾಟಕ ಸಾಹಿತ್ಯ ಪರಿಷತ್ತು ಬೆಂಗಳೂರು ಇವುಗಳ ಸಹಯೋಗದಲ್ಲಿ ನಡೆಯಲಿದೆ.
ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ರೆ.ಫಾ ಮೆಲ್ವಿನ್ ಜೆ.ಪಿಂಟೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಪ್ರೊ| ಬಿ.ಎ ವಿವೇಕ ರೈ ಮತ್ತು ಡಾ. ಎಂ. ಪ್ರಭಾಕರ ಜೋಶಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ‘ಯಕ್ಷಪಥದ ಯಾತ್ರಿಕ’ ದ ಸಂಪಾದಕರೂ, ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಕನ್ನಡ ಪ್ರೊಫೆಸರ್ ಡಾ. ನಾ. ದಾಮೋದರ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಆ ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ದಿ। ಕುಂಬಳೆ ಸುಂದರ ರಾಯರ ಅಚ್ಚುಮೆಚ್ಚಿನ ಪ್ರಸಂಗವಾದ ‘ಕೃಷ್ಣ ಸಂಧಾನ’ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

