ಉಡುಪಿ : ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯ 65ನೇ ವಾರ್ಷಿಕೋತ್ಸವವು ಜನವರಿ 15, 2023 ಭಾನುವಾರ ಸಂಜೆ 6.00 ಗಂಟೆಗೆ ಅಂಬಲಪಾಡಿಯ ‘ಶ್ರೀ ಜನಾರ್ದನ ಮಂಟಪ’ದಲ್ಲಿ ಜರಗಲಿದೆ.
ಪ್ರತೀ ವರ್ಷದಂತೆ ಈ ಸಂದರ್ಭದಲ್ಲಿ ಮೂವರು ಸಾಧಕ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಿದಿಯೂರು ಜನಾರ್ದನ ಆಚಾರ್ಯ ಸ್ಮರಣಾರ್ಥ ಪ್ರಶಸ್ತಿಯನ್ನು ಶ್ರೀ ನಿಟ್ಟೂರು ಶೀನಪ್ಪ ಸುವರ್ಣರಿಗೆ, ಕಪ್ಪೆಟ್ಟು ಬಾಬು ಶೆಟ್ಟಿಗಾರ್ ಸ್ಮರಣಾರ್ಥ ಪ್ರಶಸ್ತಿಯನ್ನು ಶ್ರೀ ರಾಜಶೇಖರ್ ಹಂದೆಯವರಿಗೆ ಹಾಗೂ ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿಯನ್ನು ಶ್ರೀ ಆರ್ಗೋಡು ಮೋಹನ್‌ದಾಸ್ ಶೆಣೈಯವರಿಗೆ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅಧ್ಯಕ್ಷ ಕೆ. ಅಜಿತ್‌ಕುಮಾರ್ ಮತ್ತು ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿರುತ್ತಾರೆ.