ಉಡುಪಿ : ಶ್ರೀ ಲಕ್ಷ್ಮೀಜನಾರ್ದನಯಕ್ಷಗಾನ ಕಲಾಮಂಡಳಿ (ರಿ.) ಅಂಬಲಪಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದೊಂದಿಗೆ ಅಂಬಲಪಾಡಿ ಕ೦ಬ್ಳಕಟ್ಟ ಶ್ರೀ ಜನಾರ್ದನ ಮಂಟಪದಲ್ಲಿ 15-01-2023 ರಂದು 65ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಜರಗಿತು.
ಈ ಸಂದರ್ಭದಲ್ಲಿ ಕಿದಿಯೂರು ಜನಾರ್ದನ ಆಚಾರ್ಯ ಪ್ರಶಸ್ತಿಯನ್ನು ನಿಟ್ಟೂರು ಶೀನಪ್ಪ ಸುವರ್ಣ, ಕಪ್ಪೆಟ್ಟು ಬಾಬು ಶೆಟ್ಟಿಗಾರ್ ಪ್ರಶಸ್ತಿಯನ್ನು ಕೋಟ ರಾಜಶೇಖರ್ ಹಂದೆ ಹಾಗೂ ಕುತ್ಪಾಡಿ ಆನಂದ ಗಾಣಿಗ ಪ್ರಶಸ್ತಿಯನ್ನು ಆರ್ಗೋಡು ಮೋಹನ್‌ದಾಸ್ ಶೆಣೈ ಇವರಿಗೆ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ ವಿಜಯ ಬಲ್ಲಾಳರು ಪ್ರದಾನ ಮಾಡಿ ಗೌರವಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಾಹೆಯ ಸಹಾಯಕ ನಿರ್ದೇಶಕ ಹಾಗೂ ಖ್ಯಾತ ಕಲಾವಿದ ಡಾ. ಕೋಳ್ಯೂರು ರಾಮಚಂದ್ರ ರಾಯರ ಪುತ್ರ ಶ್ರೀ ಶ್ರೀಧರ ಕೆ.ರಾವ್ ಅವರು ಮಾತನಾಡಿ ಅಂಬಲಪಾಡಿ ಮಂಡಳಿಯು ಕಳೆದ 65 ವರ್ಷಗಳಿಂದ ಸಾಂಪ್ರದಾಯಿಕ ಯಕ್ಷಗಾನದ ಉಳಿವು-ಬೆಳವಣಿಗೆಗಾಗಿ ತನ್ನನ್ನು ತೊಡಗಿಸಿಕೊಂಡ ಹೆಮ್ಮೆಯ ಸಂಸ್ಥೆಯಾಗಿದೆ. ಉಳಿದ ಹವ್ಯಾಸಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಮಾದರಿಯಾಗಿದೆ ಎಂಬುದಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ಅಭ್ಯಾಗತರಾದ ಡಾ.ರಾಜೇಶ್ ನಾವುಡ ಜಿ. ವಿ.ಮತ್ತು ಶ್ರೀ ಭವ್ಯಕುಮಾರ್ ಶುಭಾಶಂಸನೆಗೈದರು.ಮ೦ಡಳಿಯ ಅಧ್ಯಕ್ಷ ಕೆ.ಅಜಿತ್‌ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಸುನಿಲ್ ಕುಮಾರ್ ವರದಿ ವಾಚಿಸಿದರು.
ಸಮ್ಮಾನಿತರ ಮತ್ತು ಅತಿಥಿಗಳ ಪರಿಚಯವನ್ನು ಮಂಡಳಿಯ ಹಿರಿಯ ಸದಸ್ಯರಾದ ಮುರಲಿ ಕಡೆಕಾರ್ ಮಾಡಿದರು. ಕೋಶಾಧಿಕಾರಿ ಎ.ನಟರಾಜ ಉಪಾಧ್ಯಾಯ ನಿರ್ವಹಣೆಗೈದ ಕಾರ್ಯಕ್ರಮದ ಕೊನೆಯಲ್ಲಿ ಎ.ಪ್ರವೀಣ್ ಉಪಾಧ್ಯ ಧನ್ಯವಾದ ಸಲ್ಲಿಸಿದರು.
ಕಾರ್ಯಕ್ರಮದ ಬಳಿಕ ಕೋಟ ನರಸಿಂಹ ತುಂಗರ ನಿರ್ದೇಶನದಲ್ಲಿ ಮಂಡಳಿಯ ಬಾಲ ಕಲಾವಿದರಿಂದ ಮಾಯಾಪುರಿ-ವೀರಮಣಿ ಕಾಳಗ ಯಕ್ಷಗಾನ ಸೊಗಸಾಗಿ ಪ್ರಸ್ತುತಗೊಂಡಿತು.
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ