ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನ ಕಲಾವಿದ ದಂಪತಿಗಳಾದ ಶ್ರೀ ಹರಿನಾರಾಯಣ ಬೈಪಾಡಿತ್ತಾಯ-ಶ್ರೀಮತಿ ಲೀಲಾವತಿ ಬೈಪಾಡಿತ್ತಾಯ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಏಪ್ರಿಲ್ 6, 2023 ಗುರುವಾರ ಪಲಿಮಾರಿನಲ್ಲಿರುವ ಮೂಲ ಮಠದಲ್ಲಿ ಜರಗಲಿದೆ.
ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆಮಾಡುವಲ್ಲಿ ಯಕ್ಷಗಾನ ಕಲಾರಂಗವು ಸಹಕರಿಸಿದೆ.
ಪ್ರಶಸ್ತಿಯು ರೂ. 50,000/- ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂಬುದಾಗಿ ಪಲಿಮಾರು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.