ಯುವ ವೈದ್ಯೆಯೊಬ್ಬರು ಅಪಾರ್ಟ್‌ಮೆಂಟ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಕೋಝಿಕೋಡ್ ಮೇಯರ್ ಭವನದ ಬಳಿ ನಡೆದಿದೆ. ಕೋಝಿಕೋಡಿನ ಲಿಯೋ ಪ್ಯಾರಡೈಸ್ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಡಾ.ಸದಾ ರೆಹಮತ್ ಸಾವನ್ನಪ್ಪಿದ್ದಾರೆ.
ಶುಕ್ರವಾರ ಬೆಳಗಿನ ಜಾವ 4 ಗಂಟೆಗೆ ಈ ಘಟನೆ ನಡೆದಿದೆ. ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಸದಾ ಇಲ್ಲಿಗೆ ಬಂದಿದ್ದರು. ಇಂದು ಬೆಳಗ್ಗೆ ಶಬ್ಧ ಕೇಳಿದ ಭದ್ರತಾ ಸಿಬ್ಬಂದಿ ಓಡಿ ಬಂದಾಗ ಆಕೆ ಮಲಗಿದ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ.
ಕೂಡಲೇ ಫ್ಲಾಟ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಆಕೆಯನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರೂ ಆಕೆಯ ಪ್ರಾಣ ಉಳಿಸಲಾಗಲಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ