42ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪುತ್ತೂರು, ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ವೆಂಕಟೇಶ್ ಪ್ರಸಾದ್ ಅವರು (1.35 ಮೀ) ಕಂಚಿನ ಪದಕ ಗಳಿಸಿದ್ದಾರೆ
ಪುತ್ತೂರು, ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ಪುತ್ತೂರು ತಾಲೂಕು, ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದು 42ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಕಂಚಿನ ಪದಕದ ಗರಿಮೆಗೆ ಪಾತ್ರರಾಗಿದ್ದಾರೆ.
