ಇಂದು ದಿನಾಂಕ 08.04.2023ರ ಶನಿವಾರ ಸಂಜೆ ಘಂಟೆ 5ರಿಂದ ಯಕ್ಷಬ್ರಹ್ಮ ಅಗರಿ ಶ್ರೀನಿವಾಸ ಭಾಗವತರ ಅಗರಿ ಸಂಸ್ಮರಣೆ ಮತ್ತು ಅಗರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮ ಸುರತ್ಕಲ್ಲಿನಲ್ಲಿರುವ ಗೋವಿಂದದಾಸ ಕಾಲೇಜಿನಲ್ಲಿ ನಡೆಯಲಿದೆ. ಈ ಸಾಲಿನ ಅಗರಿ ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಡಿ. ಹರ್ಷೇ೦ದ್ರ ಕುಮಾರ್ ಅವರಿಗೆ ನೀಡಿ ಗೌರವಿಸಲಾಗುವುದು.
ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಪೂರ್ಣಿಮಾ ಯತೀಶ್ ರೈ ನೇತೃತ್ವದಲ್ಲಿ ಅಗರಿ ಶ್ರೀನಿವಾಸ ಭಾಗವತ ವಿರಚಿತ ‘ಶ್ರೀ ದೇವಿ ಮಹಿಷಮರ್ದಿನಿ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿರುವುದು.
ಕಾರ್ಯಕ್ರಮದ ವಿವರಗಳಿಗೆ ಚಿತ್ರ ನೋಡಿ.