Saturday, January 18, 2025
Homeಯಕ್ಷಗಾನ‘ಸೀತಾಪಹಾರ – ವಾಲಿಮೋಕ್ಷ’ ತಾಳಮದ್ದಳೆ

‘ಸೀತಾಪಹಾರ – ವಾಲಿಮೋಕ್ಷ’ ತಾಳಮದ್ದಳೆ

ದಿನಾಂಕ 08-04-2023ನೇ ಶನಿವಾರದಂದು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ತಿಂಗಳ ತಾಳಮದ್ದಳೆ ‘ಸೀತಾಪಹಾರ – ವಾಲಿಮೋಕ್ಷ’  ರಾಮಣ್ಣ ಮಾಸ್ತರ್ ದೇಲಂಪಾಡಿ ಮತ್ತು ಮನೆಯವರಿಂದ ಸೇವಾರೂಪವಾಗಿ ಪ್ರಸ್ತುತಗೊಂಡಿತು.

ಶ್ರೀ ಗೋಪಾಲಕೃಷ್ಣ ದೇವರ ಪೂಜಾರ್ಚನೆಯೊಂದಿಗೆ ಆರಂಭಗೊಂಡ ಈ ಕಲಾಕಾರ್ಯಕ್ರಮವು ಸಂಘದ ಕಾರ್ಯದರ್ಶಿ ಹಿರಿಯ ಭಾಗವತ ಗುರು ವಿಶ್ವವಿನೋದ ಬನಾರಿಯವರ ನಿರ್ದೇಶನದಲ್ಲಿ ಮುಂದುವರೆಯಿತು.

ಭಾಗವತರಾಗಿ ಮೋಹನ ಮೆಣಸಿನಕಾನ ಮತ್ತು ಕುಮಾರಿ ರಚನ ಚಿದ್ಗಲ್ ತಮ್ಮ ಅಪೂರ್ವ ಕಂಠಸಿರಿಯಿಂದ ಹಾಡಿ ಜನಮೆಚ್ಚುಗೆ ಗಳಿಸಿದರು. ಚೆಂಡೆ ಮದ್ದಳೆ ವಾದನದಲ್ಲಿ ಅಪ್ಪಯ್ಯ ಮಣಿಯಾಣಿ ಮಂಡೆಕ್ಕೋಲು, ವಿಷ್ಣುಶರಣ ಬನಾರಿ, ಶ್ರೀಹರಿ ಆಲಂಕಾರು, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ ಭಾಗವಹಿಸಿದ್ದರು.

ಪಾತ್ರಧಾರಿಗಳಾಗಿ ಡಾ| ರಮಾನಂದ ಬನಾರಿ ಮಂಜೇಶ್ವರ, ವೆಂಕಟರಾಮ ಭಟ್ಟ ಸುಳ್ಯ, ಬೆಳ್ಳಿಪ್ಪಾಡಿ ಸದಾಶಿವ ರೈ, ಯಂ.ರಮಾನಂದ ರೈ ದೇಲಂಪಾಡಿ, ರಾಮನಾಯ್ಕ ದೇಲಂಪಾಡಿ, ನಾರಾಯಣ ದೇಲಂಪಾಡಿ, ಪದ್ಮನಾಭ ಗೋಳಿತ್ತಡ್ಕ ಮತ್ತು ಡಿ. ರಾಮಣ್ಣ ಮಾಸ್ತರ್  ತಮ್ಮ ವಾಕ್ಚಾತುರ್ಯದಿಂದ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದ ಮೊದಲಿಗೆ ಲತಾ ಆಚಾರ್ಯ ಬನಾರಿ ಪಾತ್ರ ಪರಿಚಯ ಮಾಡಿಕೊಟ್ಟರು. ನಂದಕಿಶೋರ್ ಬನಾರಿ ಸ್ವಾಗತಿಸಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಧನ್ಯವಾದ ಸಮರ್ಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments