ಬೆಂಗಳೂರು: ರಾಯಚೂರು ಮೂಲದ ಅಂಬಿಕಾ (35) ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿರುವ ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೃತರು ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ಮನೆಯಲ್ಲಿ ಒಂಟಿಯಾಗಿ ವಾಸವಿದ್ದು, ಇಬ್ಬರು ಮಕ್ಕಳು ಹಾಸ್ಟೆಲ್‌ನಲ್ಲಿದ್ದರು.

“ಹತ್ಯೆ ಮಾಡಿದ ನಂತರ ದುಷ್ಕರ್ಮಿಗಳು ಹೊರಗಿನಿಂದ ಬಾಗಿಲು ಹಾಕಿದ್ದರು. 2-3 ದಿನಗಳ ಹಿಂದೆ ಕೊಲೆ ನಡೆದಿದ್ದು, ಅನೇಕ ಇರಿತದ ಗಾಯಗಳು ಪತ್ತೆಯಾಗಿವೆ.
ಮೇಲ್ನೋಟಕ್ಕೆ ಸಂತ್ರಸ್ತೆಗೆ ತಿಳಿದಿರುವ ಯಾರೋ ಕೊಲೆಯ ಹಿಂದೆ ಇದ್ದಾರೆ. ಆರೋಪಿಯನ್ನು ಬಂಧಿಸಿದ ನಂತರವಷ್ಟೇ ಕೊಲೆಗೆ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಆಕೆಯ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿ ಒಳ ನುಗ್ಗಿ ಕೊಳೆತ ಸ್ಥಿತಿಯಲ್ಲಿದ್ದುದನ್ನು ಪತ್ತೆ ಹಚ್ಚಿದ್ದಾರೆ