ಪ್ರೀತಿಸಿದ ಹುಡುಗಿಯ ಹುಟ್ಟುಹಬ್ಬ ಆಚರಿಸಿ, ಕೇಕ್ ಕತ್ತರಿಸಿ ಬಳಿಕ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.

ನವ್ಯಾ (24) ಕೊಲೆಯಾದ ಯುವತಿ. ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿದ್ದ ನವ್ಯಾ ಕಳೆದ ಆರು ವರ್ಷಗಳಿಂದ ಪ್ರಶಾಂತ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ನವ್ಯಾ ಮತ್ತು ಪ್ರಶಾಂತ್ ಕನಕಪುರದ ದೂರದ ಸಂಬಂಧಿಗಳು.

ಕಳೆದ ಮಂಗಳವಾರ ನವ್ಯಾ ಅವರ ಹುಟ್ಟುಹಬ್ಬವಿತ್ತು. ಅಂದು ಬ್ಯುಸಿಯಾಗಿದ್ದೆ ಎಂದು ಹೇಳಿದ್ದ ಪ್ರಶಾಂತ್ ನಿನ್ನೆ (ಏ.14) ಬರ್ತ್ ಡೇ ಸೆಲೆಬ್ರೇಷನ್ ಗೆ ಪ್ಲಾನ್ ಮಾಡಿದ್ದು, ಅದರಂತೆ ರಾತ್ರಿಯೇ ಕೇಕ್ ರೆಡಿ ಮಾಡಿ ಕೇಕ್ ತಿನ್ನಿಸಿದ್ದಾರೆ.
ಬಳಿಕ ಹರಿತವಾದ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಮೃತ ಯುವತಿಯ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತ್ತೀಚೆಗೆ ಮೃತ ಯುವತಿ ನವ್ಯಾ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದಾಳೆಂದು ಪ್ರಶಾಂತ್ ಅನುಮಾನ ವ್ಯಕ್ತಪಡಿಸಿದ್ದ. ಇದೇ ಕಾರಣಕ್ಕೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಲೇ ಇತ್ತು ಎಂದು ತಿಳಿದುಬಂದಿದೆ. ಕೊಲೆಗೆ ಇದೆ ಕಾರಣವಿರಬಹುದೆಂದು ಅನುಮಾನಿಸಲಾಗಿದೆ.
ಮೃತ ಯುವತಿಯ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.