Saturday, January 18, 2025
Homeಯಕ್ಷಗಾನಯಕ್ಷಗಾನ ಕಲಾವಿದರ ಸಮಾವೇಶ -2023

ಯಕ್ಷಗಾನ ಕಲಾವಿದರ ಸಮಾವೇಶ -2023

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯಕ್ಷನಿಧಿ ಕಲಾವಿದರ 2023ರ ಸಮಾವೇಶವು ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಜೂನ್, 1 ರಂದು ಸಂಪನ್ನಗೊಂಡಿತು.

ಸಮಾವೇಶವನ್ನು ಖ್ಯಾತ ಕಥಕ್ ಕಲಾವಿದೆ ವಿದುಷಿ ಮಧು ನಟರಾಜ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅದಮಾರು ಎಜುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಡಾ. ಎ. ಪಿ. ಭಟ್, ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈ, ಕೊಂಡದಕುಳಿ ರಾಮಚಂದ್ರ ಹೆಗಡೆ, ಸರಪಾಡಿ ಅಶೋಕ್ ಶೆಟ್ಟಿ, ಪ್ರೊ. ಕೆ. ಸದಾಶಿವರ್ ರಾವ್ ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ವಿದುಷಿ ಮಧು ನಟರಾಜ ತಂಡದವರಿಂದ ಕಥಕ್ ನೃತ್ಯದ ಪ್ರಾತ್ಯಕ್ಷಿಕೆ ಮತ್ತು ಸಂವಾದ ಕಾರ್ಯಕ್ರಮ ಜರಗಿತು. ಶ್ರೀಮತಿ ವಿದ್ಯಾಪ್ರಸಾದ್ ನಿರೂಪಿಸಿದರು.

ಪೂರ್ವಾಹ್ನ 8.30 ರಿಂದ ಡಾ. ಶೈಲಜಾ, ಡಾ. ರಾಜೇಶ್ ನಾವುಡ ಹಾಗೂ ಡಾ. ಸುನೀಲ್ ಮುಂಡ್ಕೂರ್ ತಂಡದವರಿಂದ ಕಲಾವಿದರ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು. ಅಪರಾಹ್ನ 12.00 ಗಂಟೆಯಿಂದ ಪ್ರೊ. ಎಂ. ಎಲ್. ಸಾಮಗರ ಅಧ್ಯಕ್ಷತೆಯಲ್ಲಿ ಕಾಲಮಿತಿ ಪ್ರದರ್ಶನ-ಸುಖ ಕಷ್ಟ ಎಂಬ ವಿಷಯದ ಕುರಿತು ಕಲಾವಿದರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಡಾ. ಜೆ. ಎನ್. ಭಟ್ ಕಲಾವಿದರ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಕಿವಿಮಾತುಗಳನ್ನು ಹೇಳಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಲಾವಿದರಿಗೆ ಶುಭಹಾರೈಸಿದರು.


ಸಮಾವೇಶದ ಪ್ರಧಾನ ಸಮಾರಂಭ ಅಪರಾಹ್ನ 2.30ಕ್ಕೆ ಶಾಸಕ ಯಶಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿತು. ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಪಿ. ಪುರುಷೋತ್ತಮ ಶೆಟ್ಟಿ, ಕೆನರಾ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್, ಯಕ್ಷಗಾನ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಡಾ. ಜಿ. ಎಲ್ ಹೆಗಡೆ, ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಕೋಟ್ಯಾನ್ ಅಭ್ಯಾಗತರಾಗಿ ಭಾಗವಹಿಸಿದ್ದರು.

ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ ಉಪಸ್ಥಿತರಿದ್ದರು. ಯಕ್ಷನಿಧಿಗೆ ದೊಡ್ಡ ಮೊತ್ತ ನೀಡಿದ ಕಲಾವಿದ ನೀಲ್ಕೋಡು ಶಂಕರ ಹೆಗಡೆಯವರನ್ನು ಗೌರವಿಸಲಾಯಿತು. 17 ಮಂದಿ ಕಲಾವಿದರಿಗೆ ಗೃಹನಿರ್ಮಾಣ ಉಡುಗೊರೆಯಾಗಿ ತಲಾ ರೂ. 10,000/- ದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಆರಂಭದಲ್ಲಿ ವರದಿ ವರ್ಷದಲ್ಲಿ ಅಗಲಿದೆ ಹದಿನೇಳು ಕಲಾವಿದರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ಜತೆಕಾರ್ಯದರ್ಶಿ ಹೆಚ್. ಎನ್. ಶೃಂಗೇಶ್ವರ ವೇದಿಕೆಯ ನಿರ್ವಹಣೆಗೆ ಸಹಕರಿಸಿದರು. ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments