ಪುತ್ತೂರು, ಜೂ 09: ಸ್ಕೂಲ್‌ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸುವ 66ನೇ ರಾಷ್ಟ್ರ ಮಟ್ಟದ ಯೋಗ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಈತನು ಪುತ್ತೂರಿನ ನೆಹರೂ ನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿಶ್ಚಲ್ ಕೆ.ಜಿ ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರವಿಶಂಕರ್, ಜ್ಯೋತಿ ಹಾಗೂ ಯತೀಶ್ ಬಾರ್ತಿಕುಮೆರ್ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿರುವರು.