ಪುತ್ತೂರು, ಜು 28: ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ 17 ಹಾಗೂ 18ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದೆ.
ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ಶ್ರೀನಿಧಿ ಎ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಭಾಗವಹಿಸಿದ್ದರು.
ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

