ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿನ್ನೆ ನಡೆದ ಯಕ್ಷಗಾನ ಕಾರ್ಯಕ್ರಮದ ಸಂದರ್ಭದಲ್ಲಿ ಯಕ್ಷಗುರು ಶ್ರೀ ಕರ್ಗಲ್ಲು ವಿಶ್ವೇಶ್ವರ ಭಟ್ಟರನ್ನು ಗಣ್ಯರ ಸಮಕ್ಷಮ ಸನ್ಮಾನಿಸಲಾಯಿತು.

ಯಕ್ಷಮಿತ್ರರು ಸುಬ್ರಹ್ಮಣ್ಯ ಆಯೋಜಿಸಿದ ಹಾಗೂ ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನ ಸಂಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಶ್ರೀಯುತರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಸನ್ಮಾನಿತರಿಗೆ ಶುಭ ಹಾರೈಸಿದರು.
ಬಳಿಕ ಪ್ರಸಿದ್ಧ ಕಲಾವಿದರ ಭಾಗವಹಿಸುವಿಕೆಯಲ್ಲಿ ಶ್ರೀ ಕೃಷ್ಣಲೀಲೆ, ಕಾಳಿಂಗ ಮರ್ದನ, ಕಂಸವಧೆ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.

