Sunday, September 29, 2024
Homeಸುದ್ದಿಬ್ರಾಹ್ಮಣ ವಿದ್ಯಾರ್ಥಿನಿಗೆ ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕ - ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಅಮಾನವೀಯ...

ಬ್ರಾಹ್ಮಣ ವಿದ್ಯಾರ್ಥಿನಿಗೆ ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕ – ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಅಮಾನವೀಯ ಘಟನೆ – ದೂರು ನೀಡಿದ ಪೋಷಕರು

ಶಿಕ್ಷಕರು ಎಂದರೆ ಮಕ್ಕಳನ್ನು ತಿದ್ದಿ ಸರಿದಾರಿಗೆ ತಂದು ಉತ್ತಮ ಪ್ರಜೆಯನ್ನಾಗಿ ರೂಪಿಸಬೇಕಾದವರು. ಆದರೆ ಇಲ್ಲೊಬ್ನ ಶಿಕ್ಷಕ ತನ್ನ ಮನೋವಿಕೃತಿಯನ್ನು ಹೊರಜಗತ್ತಿಗೆ ಪರಿಚಯಿಸಿದ್ದಾನೆ.

ಸರಕಾರಿ ಶಾಲೆಗಳಲ್ಲಿ (Government Schools) ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದ್ದು, ಮೊಟ್ಟೆ ತಿನ್ನದ ಸಸ್ಯಾಹಾರಿ ಮಕ್ಕಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ.

ಮಕ್ಕಳಿಗೆ ಯಾವುದು ವಿತರಿಸಬೇಕು ಎಂಬುದನ್ನು ಮೊದಲೇ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮಾಹಿತಿ ಪಡೆದಿರುತ್ತಾರೆ. ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನುಷ ಘಟನೆಯೊಂದು ನಡೆದಿದೆ.


ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿಯ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾಗುತ್ತದೆ.

ಪ್ರಾಥಮಿಕ ಶಾಲೆಯ ಶಿಕ್ಷಕ ಬಲವಂತವಾಗಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಿಸಿದ್ದಾರೆ. ಮೊಟ್ಟೆ ತಿಂದ ಬಳಿಕ ವಿದ್ಯಾರ್ಥಿನಿ ಮಾನಸಿಕವಾಗಿ ಕುಗ್ಗಿದ್ದು, ಆಕೆಯ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗುತ್ತಿದೆ, ಧಾರ್ಮಿಕ‌ ಆಚರಣೆಗೆ ಧಕ್ಕೆ ಉಂಟಾಗಿದೆ ಎಂದು‌‌ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


ಇದೊಂದು ಹೇಯ ಕೃತ್ಯ. ಇಂತಹ ಘಟನೆಗಳು ಮಕ್ಕಳ ‌ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕ್ರೂರ ಮನಸ್ಥಿತಿಯ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿಯ ತಂದೆ ಶ್ರೀಕಾಂತ್ ಶಾಸಕ ಆರಗ ಜ್ಞಾನೇಂದ್ರ ಹಾಗೂ ಡಿಡಿಪಿಐ ಅವರಿಗೆ ದೂರನ್ನು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments