ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ 79ನೇ ವಾರ್ಷಿಕೋತ್ಸವವು ದಿನಾಂಕ 23.12.2023ನೇ ಶನಿವಾರ ನಡೆಯಲಿದೆ.
ದೇಲಂಪಾಡಿಯ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ಬೆಳಿಗ್ಗೆ 7 ಘಂಟೆಗೆ ಗಣಪತಿ ಹೋಮದೊಂದಿಗೆ ಆರಂಭವಾಗಲಿರುವ ಕಾರ್ಯಕ್ರಮವು ರಾತ್ರಿಯ ತನಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೀರಿಕ್ಕಾಡು ಸಂಸ್ಮರಣೆ, ಕೀರಿಕ್ಕಾಡು ಪ್ರಶಸ್ತಿ ಪ್ರದಾನ, ನೃತ್ಯ ವೈವಿಧ್ಯ, ಭಜನೆ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಬಯಲಾಟ ಮೊದಲಾದ ಕಾರ್ಯಕ್ರಮಗಳು ನಡೆಯಲಿರುವುದು.
ಈ ಬಾರಿಯ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಅವರ ಸಂಸ್ಮರಣಾರ್ಥ ನೀಡಲಾಗುವ ‘ಕೀರಿಕ್ಕಾಡು ಪ್ರಶಸ್ತಿ’ ಯನ್ನು ತೆಂಕುತಿಟ್ಟು ಯಕ್ಷಗಾನದ ಹಿರಿಯ ಮದ್ದಳೆಗಾರರಾದ ಶ್ರೀ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಕಲಾಭಿಮಾನಿಗಳೆಲ್ಲರನ್ನೂ ಆದರದಿಂದ ಸ್ವಾಗತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಚಿತ್ರವನ್ನು ನೋಡಿ.
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ
- ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿ ಪ್ರದಾನ – ಭೀಷ್ಮ ವಿಜಯ ತಾಳಮದ್ದಳೆ