ಬಿ. ಸಿ.ರೋಡ್ ಕೈಕಂಬ ಸಮೀಪದ ಪಚ್ಚಿನಡ್ಕ ಎಂಬಲ್ಲಿ ಡಿ.28ರಂದು ಗುರುವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಸ್ಥಳೀಯ ನಿವಾಸಿ ಚೈತ್ರಾ (22) ಮೃತಪಟ್ಟವರು. ಮಂಗಳೂರಿನ ಜವಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ ತನ್ನ ತಾಯಿಯೊಂದಿಗೆ ಮನೆಗೆ ತೆರಳುತ್ತಿದ್ದಳು. ಸ್ನೇಹಿತೆಯ ರೋಸ್ ಸಮಾರಂಭದಲ್ಲಿ ಪಾಲ್ಗೊಳ್ಳಬೇಕಿದ್ದ ಚೈತ್ರಾ ಬೇಗ ವಾಪಸ್ಸಾಗಿದ್ದಳು.
ಖ್ಯಾತ ಮೇಕಪ್ ಕಲಾವಿದ ದಿವಂಗತ ಭಾಸ್ಕರ್ ಆಚಾರ್ಯ ಅವರ ಪುತ್ರಿ ಚೈತ್ರಾ ಅವರ ವಿವಾಹ ನಿಶ್ಚಯವಾಗಿದ್ದು, ಮಾರ್ಚ್ 3 ರಂದು ಕೊಡ್ಯಡ್ಕದ ಯುವಕನೊಂದಿಗೆ ವಿವಾಹವನ್ನು ಏರ್ಪಡಿಸಲಾಗಿತ್ತು
ವೇಗವಾಗಿ ಬಂದ ಕಾರು ಆಕೆಯನ್ನು ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬ ಹಾಗೂ ಮನೆಯ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ.
ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾದಕ ದ್ರವ್ಯ ಸೇವಿಸಿ ವಾಹನ ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
.