ಗುಜರಾತ್‌ನಲ್ಲಿ 30 ಅಡಿ ಆಳದ ಬೋರ್‌ವೆಲ್‌ನಿಂದ ಹೊರತೆಗೆಯಲ್ಪಟ್ಟ 3 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ
ರಾತ್ರಿ 9:50 ರ ಸುಮಾರಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು 30 ಅಡಿ ಬೋರ್‌ವೆಲ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಜಾಮ್‌ನಗರದ ಆಸ್ಪತ್ರೆಗೆ ಸಾಗಿಸಲಾಯಿತು.
ಗುಜರಾತ್‌ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ಸೋಮವಾರ ರಾತ್ರಿ 30 ಅಡಿ ಬೋರ್‌ವೆಲ್‌ಗೆ ಬಿದ್ದ ಮೂರು ವರ್ಷದ ಬಾಲಕಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾನ್ ಗ್ರಾಮದ ತನ್ನ ಮನೆಯ ಮುಂಭಾಗದ ಅಂಗಳದಲ್ಲಿ ತೆರೆದ ಬೋರ್‌ವೆಲ್‌ಗೆ ಬಿದ್ದ ಮಗುವನ್ನು ಎಂಟು ಗಂಟೆಗಳ ನಂತರ ಹೊರಕ್ಕೆ ತೆಗೆಯಲಾಯಿತು.

ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಪಾಲ್ಗೊಂಡಿತ್ತು
ಆಟವಾಡುತ್ತಿದ್ದಾಗ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೋರ್‌ವೆಲ್‌ಗೆ ಬಿದ್ದಿದ್ದಾಳೆ.
ಎನ್‌ಡಿಆರ್‌ಎಫ್ ತಂಡವು ಗಾಂಧಿನಗರದಿಂದ ರಾತ್ರಿ 8 ಗಂಟೆ ಸುಮಾರಿಗೆ ಘಟನಾ ಸ್ಥಳಕ್ಕೆ ತಲುಪಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಎನ್‌ಡಿಆರ್‌ಎಫ್‌ನ 6 ನೇ ತಂಡವು ಮಗುವನ್ನು ಬೋರ್‌ವೆಲ್‌ನಿಂದ ಯಶಸ್ವಿಯಾಗಿ ಹೊರತೆಗೆದಿದೆ. ಆಕೆಯನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸಲಾಗಿದೆ ಮತ್ತು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿದೆ” ಎಂದು ಅವರು ಹೇಳಿದರು.
ಆದರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆ ಆನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

