
ಹೊಸದಿಲ್ಲಿ: ಐಷಾರಾಮಿ ರೆಸಾರ್ಟ್‌ಗಳಿಂದ ಕೂಡಿದ ನೂರಕ್ಕೂ ಹೆಚ್ಚು ದ್ವೀಪಗಳಿಂದ ಕೂಡಿದ ದೇಶಕ್ಕೆ ತಮ್ಮ ನಿಗದಿತ ರಜೆಯನ್ನು ಮತ್ತು ಪ್ರವಾಸವನ್ಮು ರದ್ದುಗೊಳಿಸಿರುವುದಾಗಿ ಹಲವಾರು ಭಾರತೀಯರು ಹೇಳಿದ್ದಾರೆ.
ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಇಂದು ಅಮಾನತುಗೊಳಿಸಿದೆ. .
ನೆರೆಯ ಭಾರತವನ್ನು ಅವಮಾನಿಸುವಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ನಿಲುವಿನ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆಯನ್ನು ನೀಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಮಾಡಿದವರನ್ನು ಈಗ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸಚಿವರಾದ ಮರ್ಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರನ್ನು ಅಮಾನತುಗೊಳಿಸಲಾಗಿದೆ.