ಯಕ್ಷಗಾನ ಕಲಾರಂಗ ಕಚೇರಿಗೆ ಪುತ್ತಿಗೆ ಶ್ರೀಗಳ ಭೇಟಿ

ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಭಾವೀ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪರ್ಯಾಯ ಪೂರ್ವಭಾವಿಯಾಗಿ ಯಕ್ಷಗಾನ ಕಲಾರಂಗದ ಕಚೇರಿಗೆ 16.01.2024ರಂದು ಭೇಟಿ ನೀಡಿದರು.
ಯಕ್ಷಗಾನ ಕಲಾರಂಗದ ಚಟುವಟಿಕೆಗಳನ್ನು ಮೆಚ್ಚಿ, ಮುಂದೆ ಪರ್ಯಾಯದ ಅವಧಿಯಲ್ಲಿ ಸಂಸ್ಥೆಯ ಸಮಾಜಮುಖಿ ಚಟುವಟಿಕೆಗಳಿಗೆ ಸರ್ವ ರೀತಿಯ ಸಹಕಾರ ನೀಡಲಾಗುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.
ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು. ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಶ್ರೀ ಪಸನ್ನ ಆಚಾರ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
