ಪ್ರೀತಿಸಿ 8 ತಿಂಗಳ ಹಿಂದೆಯಷ್ಟೇ ಮದುವೆವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ನಡೆದದ್ದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಎಂಬಲ್ಲಿ.
ಶಮಿತಾ (24) ಎಂಬವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ಹೋಗಿದ್ದಳು. ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡ ವಿಷಯ ಗೊತ್ತಾಗಿದೆ.
ಈ ವೇಳೆಯಲ್ಲಿ ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಗಂಡನ ತಂದೆ, ತಾಯಿ ಇದ್ದರು.
ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ, ಅಸೌಖ್ಯತೆಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ.
ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ಮದುವೆವಾಗಿದ್ದರು. ವಿದ್ಯಾರ್ಥ್ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕೆಲಸಮಾಡುತ್ತಿದ್ದರು.
.
ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.