ಕಾಲೇಜು ವ್ಯಾಸಂಗ ಮಾಡುತ್ತಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ನಡೆದದ್ದು ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ.
ಮೃತ ವಿದ್ಯಾರ್ಥಿನಿ ಅಧೀಕ್ಷಾ (20) ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ತರಗತಿಯಲ್ಲಿ ಓದುತ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತ ಯುವತಿ ಅಧೀಕ್ಷಾ ಬೆಳಗ್ಗೆ ಎಷ್ಟು ಹೊತ್ತಾದರೂ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡ ಮನೆಯವರು ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿರುವ ವಿಚಾರ ಅರಿವಿಗೆ ಬಂದಿದೆ.