ಯುವತಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಭಾನುವಾರ ವಡಕರದಲ್ಲಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಿರುವಳ್ಳೂರು ಮೂಲದ ಅಖಿಲಾ (32) ಮತ್ತು ಆಕೆಯ ಮಕ್ಕಳಾದ ಕಶ್ಯಪ್ (ಆರು ವರ್ಷ) ಮತ್ತು ವೈಭವ್ (ಆರು ತಿಂಗಳು) ಮೃತ ದುರ್ದೈವಿಗಳು.
ಅಕ್ಷಿಲಾ ಅವರ ಪತಿ ನಿಧೀಶ್ ಪೋನ್ ಮಾಡಿದಾಗ ಪತ್ನಿ ಕರೆ ಸ್ವೀಕರಿಸಲಿಲ್ಲ. ಇದರಿಂದ ಸಂಬಂಧಿಕರು ಪರಿಶೀಲನೆ ನಡೆಸಿದ್ದು, ಬಳಿಕ ಸಮೀಪದ ಬಾವಿಯೊಳಗೆ ಮೃತದೇಹಗಳು ಪತ್ತೆಯಾಗಿವೆ.
ಮಹಿಳೆ ತನ್ನ ಇಬ್ಬರು ಮಕ್ಕಳನ್ನು ತನ್ನ ದೇಹಕ್ಕೆ ಕಟ್ಟಿಕೊಂಡು ಬಾವಿಗೆ ಹಾರಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.